ಯಾಣ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲೊಂದು. ಪಶ್ಚಿಮ ಘಟ್ಟಗಳ ಸಹ್ಯಾದ್ರಿ ಷ್ರೇಣಿಯಲ್ಲಿದೆ. ಇದು ಶಿರಸಿ ಇಂದ ೪೫ ಕಿ.ಮಿ. ದೂರದಲ್ಲಿದೆ. " ರೊಕ್ಕಿದ್ದರೇ ಗೋಕರ್ಣ ಸೊಕ್ಕಿದ್ದರೆ ಯಾಣ” ಎಂಬ ಮಾತು ಚಾಲ್ತಿಯಲ್ಲಿದೆ. ಏಕೆಂದರೆ ಯಾಣಕ್ಕೆ ಯಾತ್ರೆ ಕೈಕೊಳ್ಳುವದು ಹಿಂದೆ ಅಷ್ಟೊಂದು ಸಾಹಸದ ಮಾತೇ ಆಗಿತ್ತು. ಇಂದು ಯಾಣದ ಹತ್ತಿರದವರೆಗೂ ರಸ್ತೆಯಾಗಿದೆ. ಕೇವಲ ಒಂದು ಕಿಲೋಮೀಟರ ದೂರವನ್ನಷ್ಟೇ ನಡೆಯಬೇಕಾಗುವದು. ಕುಮಟೆಯಿಂದ ಹರಿಟೆಯ ಬಳಿಯ ಮಾರ್ಗದಿಂದ ಅಂಕೋಲೆಯ ಬದಿಯಿಂದ ಅಚವೆ ಮಾರ್ಗವಾಗಿ ಶಿರಸಿಯಿಂದ ಹೆಗಡೆಕಟ್ಟೆ ಮಾರ್ಗವಾಗಿ ಕಾಡಿನಲ್ಲಿ ಹಾದು ಯಾಣವನ್ನು ತಲುಪಬೇಕು. ವಡ್ಡಿ, ಮತ್ತಿ, ದೇವಿಮನೆ ಘಟ್ಟಗಳು ಸುತ್ತುವರಿಯಲ್ಪಟ್ಟದ್ದರಿಂದ ಯಾವ ದಾರಿಯಲ್ಲಿ ಬಂದರೂ ದುರ್ಗಮ ಬೆಟ್ಟದ ದಾರಿ ತಪ್ಪಿದ್ದಲ್ಲ. ಮುಂದೆ ಓದಿ...